ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
೧ ಪೂರ್ವಕಾಲವೃತ್ತಾಂತ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
25
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
1 ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
2 ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
3 ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
4 ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
5 ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
6 ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
7 ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
9 ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
10 ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,
11 ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
12 ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.
13 ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
14 ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
15 ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
16 ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
17 ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
18 ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
19 ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
20 ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
21 ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
22 ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
23 ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
24 ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
25 ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
26 ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;
27 ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
28 ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
29 ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
30 ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
31 ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
‹ ›
© 2025 DailyManna.co.in. All rights reserved.