ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
೧ ಸಮುವೇಲನು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
11
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
1 ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
2 ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
5 ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
6 ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
8 ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
9 ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
10 ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
11 ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
12 ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
13 ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
14 ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.
15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
‹ ›
© 2025 DailyManna.co.in. All rights reserved.